ಹೊಸಪೇಟೆ (ವಿಜಯನಗರ): ಹಂಪಿ ಉತ್ಸವದ ಮೊದಲ ದಿನದ ಕಾರ್ಯಕ್ರಮಗಳಲ್ಲಿ ಜನ ಭಾಗವಹಿಸದ ಕಾರಣ ಜಿಲ್ಲಾಡಳಿತವು ಶನಿವಾರ, ಭಾನುವಾರ ನಡೆಯಲಿರುವ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್ ಬೇಕಿಲ್ಲ ಎಂದು ತಿಳಿಸಿದೆ.
ಹಂಪಿ ಉತ್ಸವದಲ್ಲಿ ಭಾಗವಹಿಸಲು ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುತ್ತದೆ. ಯಾವುದೇ ಆದ್ಯತೆಗಳಿರುವುದಿಲ್ಲ. ಎಲ್ಲಾ ವೇದಿಕೆಗಳಲ್ಲಿನ ಆಸನಗಳಿಗೆ ಕಾಯ್ದಿರಿಸುವಿಕೆ ಇರುವುದಿಲ್ಲ ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.