ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ನೀಲಗುಂದ ಹರಿಜನ ಕಾಲೊನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ ಲಕ್ಷ್ಮಿ ಸಾವನ್ನಪ್ಪಿರುವ ದುರ್ದೈವಿ. ಮಹಾರಾಷ್ಟ್ರ ಮೂಲದ ಆರೋಪಿ ಚಾಲಕನನ್ನು ಬಂಧಿಸಲಾಗಿದೆ. ಎರಡು ಟ್ರಾಲಿಗಳಲ್ಲಿ ಕಬ್ಬು ತುಂಬಿದ್ದ ಟ್ರಾಕ್ಟರ್ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಬಾಲಕಿ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.