ADVERTISEMENT

ಹೊಸಪೇಟೆಯಲ್ಲಿ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 13:46 IST
Last Updated 2 ನವೆಂಬರ್ 2022, 13:46 IST

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬುಧವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಗಿದೆ.

ದಿನವಿಡೀ ಕಾರ್ಮೋಡ ಕವಿದಿತ್ತು. ಸಂಜೆ 5.45ರಿಂದ 7 ಗಂಟೆಯ ವರೆಗೆ ಎಡೆಬಿಡದೇ ಜೋರು ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಎರಡು ವಾರಗಳಿಂದ ಜಿಲ್ಲೆಯಾದ್ಯಂತ ಮಳೆಯಾಗಿರಲಿಲ್ಲ. ತಾಲ್ಲೂಕಿನ ಹೊಸೂರು, ಇಪ್ಪಿತ್ತೇರಿ ಮಾಗಾಣಿ, ನಾಗೇನಹಳ್ಳಿ, ಬಸವನದುರ್ಗ, ಕಾಳಘಟ್ಟ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT