ADVERTISEMENT

ವಿಜಯನಗರ | ಹಿಜಾಬ್‌ ವಿವಾದ: ಕಾಲೇಜುಗಳಿಗೆ ಪೊಲೀಸ್‌ ಬಂದೋಬಸ್ತ್‌ –ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2022, 12:38 IST
Last Updated 15 ಫೆಬ್ರುವರಿ 2022, 12:38 IST
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ.    

ಹೊಸಪೇಟೆ (ವಿಜಯನಗರ): ‘ಹಿಜಾಬ್‌–ಕೇಸರಿ ಶಾಲಿನ ವಿವಾದದ ನಂತರ ಮುಚ್ಚಿದ್ದ ಕಾಲೇಜುಗಳು ಬುಧವಾರ (ಫೆ.16) ಪುನಃ ಆರಂಭಗೊಳ್ಳಲಿದ್ದು, ಎಲ್ಲ ಕಾಲೇಜುಗಳಿಗೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಅಶಾಂತಿಯ ವಾತಾವರಣ ಇಲ್ಲ. ಹೈಕೋರ್ಟ್ ಆದೇಶವನ್ನು ಪಾಲಿಸಲಾಗುತ್ತದೆ. ಎಲ್ಲ ಪದವಿಪೂರ್ವ, ಪದವಿ ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಸಭೆ ನಡೆಸಿದ್ದಾರೆ. ಕೋರ್ಟ್‌ ಆದೇಶ ಪಾಲಿಸಲು ಸೂಚಿಸಲಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಕಾಲೇಜುಗಳಿಗೆ ಭದ್ರತೆ ಒದಗಿಸಲಾಗುತ್ತದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಪ್ರವೇಶಕ್ಕಷ್ಟೇ ಅವಕಾಶ ಇರುತ್ತದೆ ಎಂದು ಮಂಗಳವಾರ ವಿಡಿಯೋ ಪ್ರಕಟಣೆಯಲ್ಲಿ ವಿವರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.