ADVERTISEMENT

ಚುನಾವಣೆಗೆ ಸ್ಪರ್ಧಿಸಲು ಸಮರ್ಥನಿರುವೆ: ಸಂಸದ ಜಿ.ಎಂ.ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 15:17 IST
Last Updated 4 ಜನವರಿ 2024, 15:17 IST
<div class="paragraphs"><p>ಜಿ.ಎಂ.ಸಿದ್ದೇಶ್ವರ</p></div>

ಜಿ.ಎಂ.ಸಿದ್ದೇಶ್ವರ

   

ಹರಪನಹಳ್ಳಿ (ವಿಜಯನಗರ ಜಿಲ್ಲೆ): 'ನಾನು ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಮರ್ಥನಿದ್ದೇನೆ' ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಬಿಜೆಪಿ ಪ್ರಬಲವಾಗಿ ಬೆಳೆದು ವಿಶ್ವಕ್ಕೆ ಬೆಳಕಾಗಿದೆ. ಹಾಗಾಗಿ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದು ಸಹಜ. ಕೆಲವರು ಪ್ಲೆಕ್ಸ್ ಹಾಕಿಕೊಂಡು ಆಕಾಂಕ್ಷಿ ಎಂದು ಓಡಾಡುತ್ತಿದ್ದಾರೆ' ಎಂದರು.

ADVERTISEMENT

'ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ಎಲ್ಲಿಯೂ ವಯಸ್ಸು ನಿಗದಿ ಮಾಡಿ ಘೋಷಿಸಿಲ್ಲ. ನನಗೆ ಈಗ 71 ವರ್ಷ ವಯಸ್ಸಾಗಿದೆ, ಈಗಲೂ ಚುನಾವಣೆಗೆ ಸ್ಪರ್ಧಿಸಲು ಉತ್ಸುಕತೆ ಇದೆ. ನನಗೆ ಟಿಕೆಟ್‍ ಸಿಗುತ್ತದೆ ಎನ್ನುವ ವಿಶ್ವಾಸವಿದೆ' ಎಂದರು.

'ಹೈಕಮಾಂಡ್‍ ನಮ್ಮ ಕುಟುಂಬದಲ್ಲಿ ಯಾರಾದರೂ ಒಬ್ಬರಿಗೆ ಅಥವಾ ಕಾರ್ಯಕರ್ತರಲ್ಲಿ ಒಬ್ಬರಿಗೆ ಟಿಕೆಟ್ ಕೊಟ್ಟರೆ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ. ನಮಗೆ ಆಗದ ಕೆಲವರು ಹರಡಿಸುವ ಗಾಳಿ ಸುದ್ದಿಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು' ಎಂದು ಹೇಳಿದರು.

31 ವರ್ಷದ ಹಿಂದಿನ ಪ್ರಕರಣಕ್ಕೆ ಮರುಜೀವ ಕೊಟ್ಟು ಶ್ರೀಕಾಂತ ಪೂಜಾರ ಅವರನ್ನು ಬಂಧಿಸಿರುವುದು ಸೋಜಿಗದ ಸಂಗತಿ. ಅವರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.