ADVERTISEMENT

ಕೆಕೆಆರ್‌ಟಿಸಿ ಡಿ.ಸಿ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 17:03 IST
Last Updated 26 ಜೂನ್ 2024, 17:03 IST
   

ಹೊಸಪೇಟೆ (ವಿಜಯನಗರ): ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್‌ ನಿರ್ವಾಹಕರೊಬ್ಬರಿಂದ ಬುಧವಾರ ಸಂಜೆ ಇಲ್ಲಿ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ (ಡಿ.ಸಿ) ವಿ.ಎಸ್‌.ಜಗದೀಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿ.ಸಿ ಅವರು ₹25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹5 ಸಾವಿರ ಮುಂಗಡವಾಗಿ ಪಡೆದಿದ್ದರು. ಉಳಿದ ₹20 ಸಾವಿರವನ್ನು ಇಲ್ಲಿನ ಕೆಕೆಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ದಾಳಿ ನಡೆಯಿತು. ನಗದು ಸಮೇತ ಡಿ.ಸಿ ಸಿಕ್ಕಿಬಿದ್ದರು ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ತಿಳಿಸಿದ್ದಾರೆ.

ಡಿವೈಎಸ್‌ಪಿ ಶೀಲವಂತ ಹೊಸಮನಿ ನೇತೃತ್ವದಲ್ಲಿ ಈ ದಾಳಿ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.