ADVERTISEMENT

ಕೋವಿಡ್‌ ಆತಂಕ: ಮಕರ ಸಂಕ್ರಮಣಕ್ಕೆ ಹಂಪಿಯಲ್ಲಿ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 16:08 IST
Last Updated 12 ಜನವರಿ 2022, 16:08 IST
ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ
ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ   

ಹೊಸಪೇಟೆ (ವಿಜಯನಗರ): ಮಕರ ಸಂಕ್ರಮಣದ ನಿಮಿತ್ತ ಹಂಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಬುಧವಾರ ಆದೇಶ ಹೊರಡಿಸಿದ್ದಾರೆ.

‘ಜ. 13ರ ಬೆಳಿಗ್ಗೆ 6ರಿಂದ ಜ. 17ರ ಬೆಳಿಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಂಕ್ರಮಣ ಹಬ್ಬಕ್ಕೂ ಮೊದಲೇ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬರಲು ಆರಂಭಿಸುತ್ತಾರೆ. ಕೋವಿಡ್‌ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದ್ದು, ಜನಜಂಗುಳಿ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಹೇರಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.