ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ಎಂ.ಬಿ.ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಶ್ರೀ ಸಾಯಿ ಸ್ಲೀಪರ್ ಬಸ್ ಉರುಳಿಬಿದ್ದು ಈ ದುರಂತ ಸಂಭವಿಸಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಕೂಡ್ಲಿಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.