ADVERTISEMENT

ತಪ್ಪಿತಸ್ಧರಿಗೆ ಶಿಕ್ಷೆ ತಪ್ಪಿದ್ದಲ್ಲ: ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 13:33 IST
Last Updated 30 ಜನವರಿ 2023, 13:33 IST
   

ಕೊಟ್ಟೂರು (ವಿಜಯನಗರ): ತರಳಬಾಳು ಹುಣ್ಣಿಮೆ ಮಹೋತ್ಸವದ ಬೈಕ್‌ ರ್‍ಯಾಲಿ ಸಂದರ್ಭದಲ್ಲಿ ತಾಲ್ಲೂಕಿನ ಕಾಳಾಪುರ ಗ್ರಾಮದಲ್ಲಿ ನಡೆದ ಘಟನೆ ದುರ್ದೈವದ ಸಂಗತಿ. ವೃದ್ಧರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ ಮನೆಗಳು, ವಾಹನಗಳನ್ನು ಹಾನಿ ಮಾಡಿರುವುದು ಹೀನ ಕೃತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿದರು.

ತಾಲ್ಲೂಕಿನ ಉಜ್ಜಿನಿ ಗ್ರಾಮದ ಉಜ್ಜಯಿನಿ ಪೀಠಕ್ಕೆ ಸೋಮವಾರ ಭೇಟಿ ನೀಡಿ, ಪರಿಸ್ಧಿತಿ ಅವಲೋಕಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, 12 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಯಾರೇ ತಪ್ಪಿತಸ್ಧರಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಎಸ್ಪಿ ಅವರಿಗೆ ಈಗಾಗಲೇ ಆದೇಶಿಸಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಶೀಘ್ರದಲ್ಲಿಯೇ ಸಲ್ಲಿಸಲಾಗುವುದು ಎಂದರು.

ಉಜ್ಜಯಿನಿ ಪೀಠಾಧೀಶರಾದ ಸಿದ್ಧಲಿಂಗ ಶಿವಾಚಾರ್ಯರು, ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್‌ ಎಂ.ಕುಮಾರಸ್ವಾಮಿ ಇದ್ದರು.

ADVERTISEMENT

30ಕೆಟಿಆರ್ ಇಪಿ1 : ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಪೀಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭೇಟ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.