ಹೊಸಪೇಟೆ (ವಿಜಯನಗರ): ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಅವರ ಟ್ವಿಟ್ಟರ್ ಖಾತೆಯಲ್ಲಿ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸುರಂಗ ಮಾರ್ಗದ ಛಾಯಾಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
‘ನವ ಭಾರತದ ಮೂಲಸೌಕರ್ಯಗಳ ವಿಸ್ಮಯ’ ಎಂದು ಟ್ವೀಟ್ ಮಾಡಿರುವ ಅವರು ಮೂರು ಚಿತ್ರಗಳನ್ನು ಅದರೊಂದಿಗೆ ಟ್ಯಾಗ್ ಮಾಡಿದ್ದಾರೆ. ಕರ್ನಾಟಕದ ಹುನಗುಂದ–ಹೊಸಪೇಟೆ ಚತುಷ್ಪಥ ಕಾರ್ಯಾರಂಭ ಮಾಡಿದೆ. ಇದರಿಂದ ಕೇರಳ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ಬರೆದುಕೊಂಡಿದ್ದಾರೆ.
ಸುರಂಗ ಮಾರ್ಗಕ್ಕೆ ಹೊಂದಿಕೊಂಡಂತೆ ತುಂಗಭದ್ರಾ ಜಲಾಶಯವಿದ್ದು, ಇದು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.