ಹೊಸಪೇಟೆ (ವಿಜಯನಗರ): ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ ಹಿರಿಯ ಮಗಳು ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಮಂಗಳವಾರ ಹರಪನಹಳ್ಳಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.
ಪಟ್ಟಣದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಲತಾ ಅವರು, ಚುನಾವಣಾಧಿಕಾರಿ ಕಚೇರಿ ವರೆಗೆ ಬೆಂಬಲಿಗರೊಂದಿಗೆ ಬಂದರು. ಕಚೇರಿಯ ಗೇಟ್ ತನಕ ಬಂದಿದ್ದ ಬೆಂಬಲಿಗರು ಒಳಗೆ ಹೋಗಲು ಪ್ರಯತ್ನಿಸಿದರು.
ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದರು. ಎಂ.ಪಿ. ಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಅವರು ಪಕ್ಷ ತೊರೆದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಇವರ ಸಹೋದರಿ ಎಂ.ಪಿ. ವೀಣಾ ಮಹಾಂತೇಶ್ ಸೋಮವಾರ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.