ಹೊಸಪೇಟೆ (ವಿಜಯನಗರ): ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 65 ಮನೆಗಳಿಗೆ ಹಾನಿಯಾಗಿದೆ.
ಜಿಲ್ಲೆಯ ಹೂವಿನಹಡಗಲಿಯಲ್ಲಿ 24, ಕೂಡ್ಲಿಗಿಯಲ್ಲಿ 17, ಕೊಟ್ಟೂರು–16, ಹಗರಿಬೊಮ್ಮನಹಳ್ಳಿ–5, ಹೊಸಪೇಟೆ ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಕುಸಿದಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.
ಹೊಸಪೇಟೆ ತಾಲ್ಲೂಕಿನ ರಾಜಪುರ, ಗುಂಡ್ಲುವದ್ದಿಗೇರಿಯಲ್ಲಿ ಅಪಾರ ಪ್ರಮಾಣದ ಈರುಳ್ಳಿ, ಮೆಣಸಿನಕಾಯಿ ಬೆಳೆ ಹಾಳಾಗಿದೆ. ಹೂವಿನಹಡಗಲಿಯಲ್ಲಿ 200 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಭತ್ತ ನೆಲಕಚ್ಚಿದೆ. ಇನ್ನಷ್ಟೇ ಸಮೀಕ್ಷೆ ನಡೆಯಬೇಕಿದ್ದು, ಬಳಿಕ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನದಿಗೆ ನೀರು: ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. 50,000 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಪೂರ್ಣ ತುಂಬಿದೆ. 12 ಕ್ರಸ್ಟ್‌ಗೇಟ್‌ಗಳಿಂದ ನೀರು ಹರಿಸಲಾಗುತ್ತಿದೆ. ನದಿ ಪಾತ್ರ ಜನ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ... ಹಾವೇರಿ ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ: 567 ಮನೆಗಳಿಗೆ ಹಾನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.