ADVERTISEMENT

ಹಗರಿಬೊಮ್ಮನಹಳ್ಳಿ: ‘ಅಂಬೇಡ್ಕರ್ ಚಿಂತನೆಗಳು ಪ್ರತಿಯೊಬ್ಬರಿಗೂ ಆದರ್ಶವಾಗಿರಲಿ’

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 13:19 IST
Last Updated 6 ಡಿಸೆಂಬರ್ 2023, 13:19 IST
ಹಗರಿಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು
ಹಗರಿಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು   

ಹಗರಿಬೊಮ್ಮನಹಳ್ಳಿ: ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪ್ರತಿಯೊಬ್ಬರಿಗೂ ಆದರ್ಶವಾಗಿರಬೇಕು’ ಎಂದು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಶಿಕ್ಷಣದಿಂದ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ’ ಎಂದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ಎಚ್. ಹುಲ್ಲಾಳ ಮಾತನಾಡಿದರು. ಸಿಡಿಪಿಒ ಸುದೀಪ್, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಪ್ರಭಾಕರ, ದಲಿತ ಸಂಘಟನೆಗಳ ಮುಖಂಡರಾದ ಎಚ್.ದೊಡ್ಡಬಸಪ್ಪ, ಎಚ್.ಮಹೇಶ್, ಪ್ರಭಾಕರ ಇದ್ದರು.

ಚಿಂತ್ರಪಳ್ಳಿಯ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತಪರ ಸಂಘಟನೆಗಳು ಮತ್ತು ಛಲವಾದಿ ಮಹಾಸಭಾದಿಂದ ಮುಖಂಡರು ಅಂಬೇಡ್ಕರ್ ಪುತ್ಥಳಿಗೆ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.