ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ದುರಸ್ತಿಗೊಳಿಸಲಾಯಿತು.
ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯು ನೀರಿನ ಘಟಕ ದುರಸ್ತಿಗೊಳಿಸಿದೆ. ಘಟಕಕ್ಕೆ ಹೊಂದಿಕೊಂಡಂತೆ ಇದ್ದ ಕೈತೊಳೆಯುವ ಜಾಗ, ನೀರಿನ ಕೊಳಾಯಿ ಕೂಡ ದುರಸ್ತಿ ಮಾಡಿಸಿದೆ. ಆ. 21ರಂದು ದೇವಾಲಯಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಭೇಟಿ ನೀಡಲಿದ್ದಾರೆ.
‘ಹಂಪಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಬರ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಗುರುವಾರ (ಆ.19) ವರದಿ ಪ್ರಕಟಿಸಿತ್ತು. ನೀರಿನ ಘಟಕ ಕೆಟ್ಟಿದ್ದರಿಂದ ಪ್ರವಾಸಿಗರಿಗೆ ಕುಡಿಯುವ ನೀರು ಸಿಗದೆ ತೊಂದರೆ ಅನುಭವಿಸುತ್ತಿದ್ದರು. ವರದಿ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.