ADVERTISEMENT

ಅಪರಾಧ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪಿಎಸ್ಐ ಗೀತಾಂಜಲಿ ಶಿಂಧೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 13:59 IST
Last Updated 4 ಡಿಸೆಂಬರ್ 2023, 13:59 IST
ಕೊಟ್ಟೂರಿನಲ್ಲಿ ಅಪರಾಧ ತಡೆಗಟ್ಟಲು ಪಿಎಸ್ಐ ಗೀತಾಂಜಲಿ ಶಿಂಧೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು
ಕೊಟ್ಟೂರಿನಲ್ಲಿ ಅಪರಾಧ ತಡೆಗಟ್ಟಲು ಪಿಎಸ್ಐ ಗೀತಾಂಜಲಿ ಶಿಂಧೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು   

ಕೊಟ್ಟೂರು: ಪಟ್ಟಣದ ಸುತ್ತ ಮುತ್ತ ಇತ್ತೀಚೆಗೆ ಹೆಚ್ಚುತ್ತಿರುವ ಕಳವು ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮಾತನಾಡಿ, ‘ಸಭೆ ಸಮಾರಂಭಗಳಿಗೆ ಹಾಗೂ ಪರಸ್ಥಳಗಳಿಗೆ ತೆರಳುವಾಗ ಒಡವೆ, ಹಣ, ಬೆಲೆ ಬಾಳುವ ವಸ್ತುಗಳನ್ನು ಲಾಕರ್‌ಗಳಲ್ಲಿಡಬೇಕು. ಮನೆ ಹೊರಗಡೆ ವಿದ್ಯುತ್ ದೀಪಗಳನ್ನು ಹಾಕಿರಬೇಕು’ ಎಂದರು.

‘ನೀವು ಬೇರೆ ಕಡೆ ಹೋಗುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು’ ಎಂದ ಅವರು, ‘ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.