ADVERTISEMENT

ಕೊಟ್ಟೂರು: ಸೋಲಾರ್ ಘಟಕ ತೆರವುಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 14:12 IST
Last Updated 25 ಅಕ್ಟೋಬರ್ 2024, 14:12 IST
ಕೊಟ್ಟೂರಿನ ತಾಲ್ಲೂಕು ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಜಿ.ಕೆ.ಅಮರೀಶ್ ಅವರಿಗೆ ಮನವಿ ಸಲ್ಲಿಸಿದರು
ಕೊಟ್ಟೂರಿನ ತಾಲ್ಲೂಕು ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಜಿ.ಕೆ.ಅಮರೀಶ್ ಅವರಿಗೆ ಮನವಿ ಸಲ್ಲಿಸಿದರು   

ಕೊಟ್ಟೂರು: ತಾಲ್ಲೂಕಿನಾದ್ಯಂತ ಕೆಲವು ಪ್ರದೇಶಗಳಲ್ಲಿ ಯೋಗ್ಯವಾದ ಕೃಷಿ ಭೂಮಿಯಲ್ಲಿ ಖಾಸಗಿ ಕಂಪನಿಯವರು ಸೋಲಾರ್ ಘಟಕಗಳನ್ನು ಅಳವಡಿಸುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಗ್ರಹಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಜಿ.ಕೆ.ಅಮರೀಶ್ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ‘ಮಧ್ಯವರ್ತಿಗಳ ಸಹಕಾರದಿಂದ ಜಮೀನುಗಳನ್ನು 30 ವರ್ಷಕ್ಕೂ ಹೆಚ್ಚಿನ ಅವಧಿಗೆ ಕಡಿಮೆ ದರದಲ್ಲಿ ಕರಾರು ಮಾಡಿಕೊಳ್ಳುವುದರಿಂದ ಫಲವತ್ತಾದ ಭೂಮಿಗಳಲ್ಲಿ ಕೃಷಿ ಚಟುವಟಿಕೆ ಸ್ಥಗಿತಗೊಂಡು ಮುಂದಿನ ದಿನಗಳಲ್ಲಿ ದುಷ್ಪರಿಣಾಮ ಬೀರಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ವಕೀಲರಾದ ಹನುಮಂತಪ್ಪ ಮಾತನಾಡಿ, ‘ಕೃಷಿಗೆ ಯೋಗ್ಯವಲ್ಲದ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಬೇಕೇ ಹೊರತು ಯೋಗ್ಯವಾದ ಕೃಷಿ ಭೂಮಿ ಬಳಕೆ ಮಾಡುವವರ ವಿರುದ್ಧ ಸರ್ಕಾರ ಅನುಮತಿ ನೀಡಬಾರದು’ ಎಂದರು.

ರೈತ ಸಂಘದ ಪದಾಧಿಕಾರಿಗಳು, ಡಿಎಸ್ಎಸ್ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.