ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 9:16 IST
Last Updated 21 ಜೂನ್ 2024, 9:16 IST
<div class="paragraphs"><p> ಮುಖ್ಯಮಂತ್ರಿ ಸಿದ್ದರಾಮಯ್ಯ </p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಹೊಸಪೇಟೆ (ವಿಜಯನಗರ): ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆ 10ರಿಂದ 27ಕ್ಕೆ ಕುಸಿದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಡಿಪಿಐ ಅವರ ಅಮಾನತಿಗೆ ಆದೇಶ ನೀಡಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕೆಡಿಪಿ ಸಭೆ ನಡೆಸುತ್ತಿದ್ದ ವೇಳೆ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಯಿತು. ಆಗ ಎಎಸ್ಸೆಸ್ಸೆಲ್ಸಿ ಫಲಿತಾಂಶ ಸಿಎಂ ಅವರನ್ನು ಸಿಟ್ಟಿಗೆಬ್ಬಿಸಿತು.

ADVERTISEMENT

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಕ್ಕಾಪಟ್ಟೆ ಸಿಟ್ಟಾದ ಸಿಎಂ, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಯುವರಾಜ್ ನಾಯ್ಕ್ ಅವರನ್ನು ಪ್ರಶ್ನಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಪ್ರಮಾಣ ಕುಸಿದಿರುವುದಕ್ಕೆನೀವೇ ಕಾರಣ. ನಿಮ್ಮ ಬಿಇಒ ಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಸಿಎಂ ಡಿಡಿಪಿಐ ಗೆ ಪ್ರಶ್ನಿಸಿದರು. ಈ ಬಾರಿ ಶೇ 20 ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಪ್ರಶ್ನಿಸಿದರು.

10ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಪ್ರಶ್ನಿಸಿದರು.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ಅವರಿಗೆ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಸಂಪರ್ಕಿಸಿದ ಸಿಎಂ, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಅವರನ್ನು ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು.

ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಅಹ್ಮದ್ ಅವರು ಸಭೆಯಿಂದ ಹೊರಗೆ ನಡೆಯುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.