ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಗಳವಾರ ಮೂವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು.
ವಿದ್ಯಾರ್ಥಿಗಳನ್ನು ಗಮನಿಸಿದ ಪ್ರಾಂಶುಪಾಲ ಪ್ರೊ.ಸತೀಶ್ ಪಾಟೀಲ್, ‘ಕಾಲೇಜಿನಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು’ ಎಂದು ತಿಳಿ ಹೇಳಿದರು.
ಅದಕ್ಕೆ ವಿದ್ಯಾರ್ಥಿಗಳು, ‘ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಅವರಿಗೂ ತಿಳಿ ಹೇಳಬೇಕು’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.