ADVERTISEMENT

ಹೊಸಪೇಟೆಯಲ್ಲಿ ಸಾವಿರಾರು ಮಂದಿಯಿಂದ ಹನುಮಾನ್‌ ಚಾಲೀಸಾ ಪಠಣ

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 5:56 IST
Last Updated 21 ಜನವರಿ 2024, 5:56 IST
   

ಹೊಸಪೇಟೆ (ವಿಜಯನಗರ): ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿಯ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಸಾವಿರಕ್ಕೂ ಅಧಿಕ ಮಂದಿ ಏಕಕಂಠದಲ್ಲಿ ಹನುಮಾನ್‌ ಚಾಲೀಸಾ ಪಠಣ ಆರಂಭಿಸಿದ್ದಾರೆ.

ಶ್ರೀಕ್ಷೇತ್ರ ಹೆಬ್ಬಳ್ಳಿ ಚೈತನ್ಯಾಶ್ರಮದ ದತ್ತಾವಧೂತ ಗುರುಗಳ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಇಲ್ಲಿನ ವೆಂಕಟೇಶ್ವರ ಕಲ್ಯಾಣ ಮಂಟಪದ ಒಳಗೆ ಭಕ್ತರು ಕಕ್ಲಿರಿದು ಸೇರಿದ್ದು, ಹೊರಗಡೆಯೂ ನೂರಾರು ಮಂದಿ ಕುಳಿತು ಆಂಜನೇಯನ ಸ್ತುತಿ ಮಾಡುತ್ತಿದ್ದಾರೆ.

ಅಖಂಡ ಹನುಮಾನ್ ಚಾಲೀಸಾ ಪಠಣ ಶನಿವಾರ ಬೆಳಿಗ್ಗೆ 6 ಗಂಟೆಗೆ ಆರಂಭವಾಗಿತ್ತು. ಅಹೋರಾತ್ರಿ ನಡೆದ ಪಠಣದಲ್ಲಿ ವಿವಿಧ ಬ್ಯಾಚ್‌ ಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. 24 ಗಂಟೆಯಲ್ಲಿ ಇಲ್ಲಿ ಒಂದು ಲಕ್ಷಕ್ಕೂ ಅಧಿಕ ಬಾರಿ ಚಾಲೀಸಾ ಪಠಣ ನಡೆದಿದೆ.
ಅಖಂಡ ಹನುಮಾನ್ ಚಾಲೀಸಾ ಪಠಣ ಮಧ್ಯಾಹ್ನ 12 ಗಂಟೆಗೆ ಕೊನೆಗೊಳ್ಳಲಿದೆ.
ಸೋಮವಾರ ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಇಲ್ಲಿ ರಾಮತಾರಕ ಯಜ್ಞ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.