ADVERTISEMENT

ತುಂಗಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ: ಪುರಂದರ ಮಂಟಪ ಸಂಪೂರ್ಣ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 16:13 IST
Last Updated 14 ಅಕ್ಟೋಬರ್ 2024, 16:13 IST
ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು ಹರಿಸಲಾಗಿದ್ದು, ಸೋಮವಾರ ಹಂಪಿಯ ಪುರಂದರ ಮಂಟಪ ಸಂಪೂರ್ಣವಾಗಿ ಮುಳುಗಿದೆ
ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು ಹರಿಸಲಾಗಿದ್ದು, ಸೋಮವಾರ ಹಂಪಿಯ ಪುರಂದರ ಮಂಟಪ ಸಂಪೂರ್ಣವಾಗಿ ಮುಳುಗಿದೆ   

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು 20 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಹರಿಸುತ್ತಿರುವ ಕಾರಣ ಹಂಪಿಯ ಪುರಂದರ ಮಂಟಪ ಸೋಮವಾರ ಸಂಪೂರ್ಣ ಮುಳುಗಡೆಯಾಗಿದೆ. ಈ ವರ್ಷ ಮೂರನೇ ಬಾರಿಗೆ ಈ ಮಂಟಪ ಮುಳುಗಡೆಯಾಗಿದೆ.

ಹಿಂಗಾರು ಮಳೆಯಿಂದ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ಹಲವು ಕೆರೆಗಳು ತುಂಬಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯ 20  ಅಡಿ ಎತ್ತರವಿದ್ದು, ಸದ್ಯ 14 ಅಡಿ ನೀರು ತುಂಬಿದೆ. ಈ ಜಲಾಶಯ ಭರ್ತಿಯಾದರೆ 2 ಟಿಂಎಸಿ ಅಡಿ ನೀರು ಸಂಗ್ರಹವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT