ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಆರ್. ಗವಿಯಪ್ಪ ಅವರು ಸೋಮವಾರ ವಿಧಾನಸಭೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.
ಹೊಸದಾಗಿ ಶಾಸಕರಾಗಿ ಆಯ್ಕೆಯಾದವರು ಸೋಮವಾರ ಪ್ರಮಾಣ ಸ್ವೀಕರಿಸಿದರು. ಅವರೊಂದಿಗೆ ಗವಿಯಪ್ಪ ಅವರು ಆಂಗ್ಲ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಗ್ಗೆ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿವೆ.
‘ಹಂಪಿಯಲ್ಲಿ ತಾಯಿ ಭುವನೇಶ್ವರಿ ನೆಲೆಸಿದ್ದಾಳೆ. ಕನ್ನಡ ನಾಡಿಗೆ ಸ್ಫೂರ್ತಿಯ ನೆಲವಿದು. ಆದರೆ, ಈ ಕ್ಷೇತ್ರ ಪ್ರತಿನಿಧಿಸುತ್ತಿರುವ ಗವಿಯಪ್ಪ ಅವರು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರ ನಡೆ ಖಂಡನಾರ್ಹ. ಕನ್ನಡಿಗರಲ್ಲಿ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಗವಿಯಪ್ಪ ಅವರನ್ನು ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.