ADVERTISEMENT

ಹಗರಿಬೊಮ್ಮನಹಳ್ಳಿ |ವಕೀಲರ ಮೇಲೆ ಹಲ್ಲೆ ಪ್ರಕರಣ: ಕಾನ್‌ಸ್ಟೆಬಲ್ ಬಂಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 13:44 IST
Last Updated 6 ಡಿಸೆಂಬರ್ 2023, 13:44 IST
ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಅವರಿಗೆ ಮನವಿ ಸಲ್ಲಿಸಿದರು
ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಅವರಿಗೆ ಮನವಿ ಸಲ್ಲಿಸಿದರು   

ಹಗರಿಬೊಮ್ಮನಹಳ್ಳಿ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಸಂಘದ ಹಿರಿಯ ಸಲಹೆಗಾರ ಬಿ.ವಿ.ಶಿವಯೋಗಿ ಮಾತನಾಡಿ, ‘ಹಲ್ಲೆಗೆ ಕಾರಣರಾದ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ಬಂಧಿಸಬೇಕು. ಪ್ರಕರಣದ ಸ್ವಯಂ ಪ್ರೇರಿತ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯುತ್ತಿರುವಾಗ ಹಲ್ಲೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೇ ಪೊಲೀಸ್ ಠಾಣೆಯಲ್ಲಿ ಬಿಡುಗುಗಡೆ ಮಾಡಿರುವುದು ವಕೀಲರ ಸಮುದಾಯಕ್ಕೆ ಮಾಡಿರುವ ಅಪಮಾನವಾಗಿದೆ’ ಎಂದರು.

ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಪಿ.ರಮೇಶ್, ಕಾರ್ಯದರ್ಶಿ ಶ್ರೀನಿವಾಸ್, ಮಹೇಶ್ವರಗೌಡ, ಸಿ.ಬಸವರಾಜ, ಟಿ.ಜಿ.ಎಂ.ಕೊಟ್ರೇಶ್, ಎಚ್.ಆಂಜನೇಯ, ಕೊಟ್ರೇಶ್ ಶೆಟ್ಟರ್, ಚಂದ್ರಶೇಖರ್, ಜಗದೀಶ್, ಯಾಸ್ಮೀನ್, ನಾಗರತ್ನಾ, ಶಿವಗಂಗಮ್ಮ, ಶ್ರೀದೇವಿ, ಗುರುಬಸವರಾಜ ಪಾಲ್ಗೊಂಡಿದ್ದರು.

ADVERTISEMENT

ಇದಕ್ಕೂ ಮುನ್ನ ವಕೀಲರು ಕಲಾಪ ಬಹಿಷ್ಕರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.