ಹೂವಿನಹಡಗಲಿ (ವಿಜಯನಗರ ಜಿಲ್ಲೆ) : ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ.
ಮಾನ್ಯರಮಸವಾಡ ಗ್ರಾಮದ ಶಂಭು ತೋಟಣ್ಣನವರ (26) ಮೃತ. ಹೊಸಹಳ್ಳಿ ಗ್ರಾಮದ ಸಂಬಂಧಿಯನ್ನು ಭೇಟಿಯಾಗಿ ಬೈಕ್ ನಲ್ಲಿ ಸ್ವಗ್ರಾಮಕ್ಕೆ ಬರುವಾಗ ಮಳೆ ಪ್ರಾರಂಭವಾಗಿತ್ತು. ಅರಳಿಹಳ್ಳಿ ಸಮೀಪ ಬೈಕ್ ನಿಲ್ಲಿಸಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಎರಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.