ADVERTISEMENT

ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 14:58 IST
Last Updated 14 ಮಾರ್ಚ್ 2024, 14:58 IST
ಹೊಸಪೇಟೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿಸಿ ಸಿಇಒ ಸದಾಶಿವ ಪ್ರಭು ಬಿ. ಅವರ ಅಧ್ಯಕ್ಷತೆಯಲ್ಲಿ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು
ಹೊಸಪೇಟೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿಸಿ ಸಿಇಒ ಸದಾಶಿವ ಪ್ರಭು ಬಿ. ಅವರ ಅಧ್ಯಕ್ಷತೆಯಲ್ಲಿ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು   

ಹೊಸಪೇಟೆ (ವಿಜಯನಗರ): ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು.

ದಢಾರ ಮತ್ತು ರುಬೆಲ್ಲಾ ನಿರ್ಮೂಲನೆ, ಬಾಲ ಗರ್ಭಿಣಿಯರು, ಶಾಲಾ ಮಕ್ಕಳ ಲಸಿಕಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಗರ್ಭಿಣಿಯರ ದಾಖಲಾತಿ, ಅಪೌಷ್ಟಿಕ ಮಕ್ಕಳ ದಾಖಲಾತಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೇವೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಿಇಒ ಅವರು ಮಾತನಾಡಿ, ಲಸಿಕಾ ಕಾರ್ಯಕ್ರಮಗಳು ಸಮಯಕ್ಕೆ ಸರಿಯಾಗಿ ಅಚ್ಚುಕಟ್ಟಾಗಿ ನಡೆಯಬೇಕು. ಸಾರ್ವಜನಿಕರಿಗೆ ವಿಶ್ವಾಸ ಬರುವ ಹಾಗೆ ಎಲ್ಲಾ ಆರೋಗ್ಯ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.