ADVERTISEMENT

ಕೊಲ್ಹಾರ ಬಳಿ ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಘಟನೆ ಕೃಷ್ಣಾ ನದಿ ತೀರದ ಕೊಲ್ಹಾರ ಪಟ್ಟಣದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

​ಪ್ರಜಾವಾಣಿ ವಾರ್ತೆ
Published 18 ಮೇ 2024, 8:02 IST
Last Updated 18 ಮೇ 2024, 8:02 IST
<div class="paragraphs"><p>ಕೊಲ್ಹಾರ ಬಳಿ ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ  ದರೋಡೆ</p></div>

ಕೊಲ್ಹಾರ ಬಳಿ ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

   

ವಿಜಯಪುರ: ಹತ್ತಿ ಮಾರಾಟ ಮಾಡಿ ಹಣವನ್ನು ಕ್ಯಾಂಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದವರನ್ನು ದರೋಡೆಕೋರರು ಅಡ್ಡಗಟ್ಟಿ, ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಕೃಷ್ಣಾ ನದಿ ತೀರದ ಕೊಲ್ಹಾರ ಪಟ್ಟಣದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಕಲಬುರ್ಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಅವರಿಗೆ ಸೇರಿದ ಹತ್ತಿಯನ್ನು

ADVERTISEMENT

ಧಾರವಾಡ ತಾಲ್ಲೂಕಿನ ಅಮ್ಮಿನಭಾವಿ ಜಿನ್ನಿಂಗ್ ಗೆ ತೆಗೆದುಕೊಂಡು ಹೋಗಿ, ಮಾರಾಟ ಮಾಡಿ ₹ 32 ಲಕ್ಷ ನಗದು ತೆಗೆದುಕೊಂಡು ವಾಪಸ್ ಜೀವರ್ಗಿಗೆ ತೆರಳುತ್ತಿದ್ದ ವೇಳೆ ದರೋಡೆ ನಡೆದಿದೆ.

ಕ್ಯಾಂಟರ್ ನಲ್ಲಿ ಹತ್ತಿ ತಂದಿದ್ದ ವ್ಯಾಪಾರಿ ಚಂದ್ರಕಾಂತ ಅವರ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ

ಹತ್ತಿ ಮಾರಾಟ ಮಾಡಿ ರೈತರಿಗೆ ಕೊಡಬೇಕಿದ್ದ ₹ 32 ಲಕ್ಷ ಹಣವನ್ನು ತೆಗೆದುಕೊಂಡು ಹೋಗುವ ವೇಳೆ ದರೋಡೆ ನಡೆದಿದೆ.

ಕೊಲ್ಹಾರ ಪಟ್ಟಣದ ಬಳಿ ಕ್ಯಾಂಟರ್ ಅನ್ನು ಬುಲೆರೋ ವಾಹನದಲ್ಲಿ ಬಂದ ದರೋಡೆಕೋರರು ಅಡ್ಡಗಟ್ಟಿ, ನಂತರ ಕ್ಯಾಂಟರ್ ಮುಂಭಾಗದ ಗಾಜಿಗೆ ಕಲ್ಲು, ರಾಡ್ ನಿಂದ ಹೊಡೆದು ಜಖಂಗೊಳಿಸಿದ್ದಾರೆ. ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ದರೋಡೆಕೋರರಿಂದ ಹಲ್ಲೆಗೀಡಾದ ಮಹಾಂತೇಶ ಹಾಗೂ ಮಲ್ಲು ಕೊಡಚಿಗೆ ಕೊಲ್ಹಾರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಎಸ್ ಪಿ ಋಷಿಕೇಶ ಸೋನಾವಣೆ ಹಾಗೂ ಪೊಲೀಸ್ ಅಧಿಕಾರಿಗಖು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದರೋಡೆಕೋರರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.