ಸಿಂದಗಿ: ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಡಾ.ಬಾಬಾಸಾಹೇಬ ಅಂಬೇಡ್ಕರ್ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಆದ್ದರಿಂದ ಭೀಮ್ ಬಾಯ್ಸ್ ಸಂಘಟನೆ ವತಿಯಿಂದ ಯುವಕರು ಭೀಮೋತ್ಸವ ವಾಹನವನ್ನು ಹಳ್ಳಿ-ಹಳ್ಳಿಗೂ ತೆಗೆದುಕೊಂಡು ಹೋಗಿ ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವ ಸಂದೇಶ ಸಾರಲು ಮುಂದಾಗಿರುವುದು ಅಭಿನಂದನಾರ್ಹ ಕಾರ್ಯ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.
ಇಲ್ಲಿಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಭೀಮ್ ಬಾಯ್ಸ್ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೀಮೋತ್ಸವ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಯಂತಿ ಕಾರ್ಯಕ್ರಮದ ಪ್ರಚಾರದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವೈ.ಸಿ.ಮಯೂರ, ಭೀಮ್ ಬಾಯ್ಸ್ ಪ್ರಮುಖ ಸಚಿನ್ ಚೌರ ಮಾತನಾಡಿದರು.
ಪುರಸಭೆ ಸದಸ್ಯರಾದ ಸಂದೀಪ ಚೌರ, ರಾಜಣ್ಣ ನಾರಾಯಣಕರ, ಶರಣಗೌಡ ಪಾಟೀಲ ಹಾಗೂ ಶರಣಪ್ಪ ಸುಲ್ಪಿ, ಆನಂದ ಡೋಣೂರ, ಜೈಭೀಮ ತಳಕೇರಿ, ಜೈಭೀಮ ಕೂಚಬಾಳ, ಶ್ರೀಮಂತ ಚೌರ, ನವೀನ ಹೊಸಮನಿ ಶಶಿಧರ ಹಿಪ್ಪರಗಿ, ಭೀಮು ಚೌರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.