ದೇವರಹಿಪ್ಪರಗಿ: ಪಟ್ಟಣದ ನೂತನ ಇಂದಿರಾ ಕ್ಯಾಂಟಿನ್‌ಗೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಭೂಮಿಪೂಜೆ ನೆರವೇರಿಸಿದರು.
ಪಶು ಆಸ್ಪತ್ರೆಯ ಮುಂಭಾಗದಲ್ಲಿ ಶನಿವಾರ ನೂತನವಾಗಿ ಆರಂಭಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮತಕ್ಷೇತ್ರದ ಹಾಗೂ ತಾಲ್ಲೂಕಿನ ಕೇಂದ್ರ ಸ್ಥಳವಾದ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಅಗತ್ಯವಾಗಿದೆ. ಜನರ ಬಹುದಿನದ ಬೇಡಿಕೆ ಈಡೇರಲಿದ್ದು, ನೂತನ ಇಂದಿರಾ ಕ್ಯಾಂಟಿನ್ ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.
ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ತಾಂಬೋಳಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ, ಸುಮಂಗಲಾ ಸೆಬೇನವರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಮಹಿಳಾ ಪಿಎಸೈ ಪಿ.ಎಮ್.ಚೌರ, ಬಸವರಾಜ ದೇವಣಗಾಂವ, ಕಾಶೀನಾಥ ಕಡ್ಲೇವಾಡ, ಸೋಮು ದೇವೂರ, ವಿನೋದ ಚವ್ಹಾಣ, ಕಾಶೀನಾಥ ವಡ್ಡೋಡಗಿ, ವೀರೇಶ ಕುದರಿ, ಮಿಯಾಜ್ ಯಲಗಾರ, ಫಿರೋಜ್ ಮುಲ್ಲಾ, ಮುತ್ತುರಾಜ ಹಿರೇಮಠ, ಸಹಿತ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.