ADVERTISEMENT

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್.ಟಿ. ಮೋರ್ಚಾದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 15:39 IST
Last Updated 27 ಜೂನ್ 2024, 15:39 IST
ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದಿಂದ ಕೈಗೊಳ್ಳಲಾಗುತ್ತಿರುವ ಬೃಹತ್ ಪ್ರತಿಭಟನೆ ಅಂಗವಾಗಿ ದೇವರಹಿಪ್ಪರಗಿ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಜರುಗಿತು
ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದಿಂದ ಕೈಗೊಳ್ಳಲಾಗುತ್ತಿರುವ ಬೃಹತ್ ಪ್ರತಿಭಟನೆ ಅಂಗವಾಗಿ ದೇವರಹಿಪ್ಪರಗಿ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಜರುಗಿತು   

ದೇವರಹಿಪ್ಪರಗಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚಿಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್.ಸಿ, ಎಸ್.ಟಿ ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಸತ್ಯಗಳನ್ನು ಮರೆಮಾಚಿ ದ್ರೋಹ ಎಸುಗುವ ಕಾರ್ಯ ಮಾಡಿದೆ. ಇದಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣ ಲೂಟಿ ಮಾಡಿದ ಪ್ರಕರಣವೇ ಸಾಕ್ಷಿಯಾಗಿದೆ. ಇವುಗಳನ್ನು ವಿರೋಧಿಸಿ ಜಿಲ್ಲಾ ಎಸ್.ಟಿ.ಮೋರ್ಚಾದಿಂದ ಜೂನ್‌ 28ರಂದು ವಿಜಯಪುರದ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಎಲ್ಲ ಬಿಜೆಪಿ ಎಸ್.ಟಿ. ಮೋರ್ಚಾ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದರು.

ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಅನೀಲ ಜಮಾದಾರ, ರವಿ ವಗ್ಗಿ, ಭರತ ಕೋಳಿ, ಮಾಂತೇಶ ಬೇವೂರ, ಪ್ರಕಾಶ ದೊಡಮನಿ, ಮಹಾಂತೇಶ ಬಿರಾದಾರ, ಶರಣು ದಳವಾಯಿ, ಮಲ್ಲು ಕೋಲಕಾರ, ಭೀಮನಗೌಡ ಲಚ್ಯಾಣ, ಉಮೇಶ ವಾಲೀಕಾರ, ಶಾಂತಪ್ಪ ನಾವದಗಿ, ಯಲ್ಲು ಬಾವೂರ, ಚಿದು ದಳವಾಯಿ, ಮಹಾಂತೇಶ ತಳವಾರ ಮಾಳಪ್ಪ ದಿಡ್ಡಿಮನಿ, ಪ್ರಕಾಶ ತಳವಾರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.