ADVERTISEMENT

ವಕ್ಪ್ ಗೆಜೆಟ್ ಅಧಿಸೂಚನೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2024, 8:30 IST
Last Updated 4 ನವೆಂಬರ್ 2024, 8:30 IST
   

ವಿಜಯಪುರ: 1974ರ ವಕ್ಪ್ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ, ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು.

ಇಲ್ಲಿನ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಪ್ರತಿಭಟನಾ ಜಾಥಾದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೊಲ್ಹಾಪುರ ಕನ್ಹೇರಿ ಮಠದ ‌ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜ್ಞಾನ ಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಭಾರತೀಯ ಕಿಸಾನ್ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಂ.ಕೋಕರೆ, ಗುರುನಾಥ ಬಗಲಿ, ಮಲ್ಲನಗೌಡ ಪಾಟೀಲ, ಬಿಜೆಪಿ ಮುಖಂಡರಾದ ಉಮೇಶ ಕಾರಜೋಳ, ವಿಜುಗೌಡ ಪಾಟೀಲ, ಆರ್.ಎಸ್.ಪಾಟೀಲ ಕೂಚಬಾಳ, ಗುರುಲಿಂಗಪ್ಪ ಅಂಗಡಿ, ಅಪ್ಪು ಪಟ್ಟಣಶೆಟ್ಟಿ, ರಮೇಶ ಭೂಸನೂರ, ವಿಜಯ ಜೋಶಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಬಳಿಕ ಮನವಿ ಸಲ್ಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.