ADVERTISEMENT

ಬಿ.ಎಲ್.ಡಿ.ಇ: ಗರ್ಭಿಣಿಯರಿಗೆ ಉಚಿತ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 16:05 IST
Last Updated 28 ಜೂನ್ 2024, 16:05 IST

ವಿಜಯಪುರ: ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುವ ಗರ್ಭಿಣಿಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಹೆರಿಗೆಗಾಗಿ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯಂತೆ ಆಸ್ಪತ್ರೆಗೆ ಹೆರಿಗೆಗೆ ಬರುವ ಗರ್ಭಿಣಿಯರಿಗೆ ಸಾಮಾನ್ಯ ವಾರ್ಡ್‌ಗಳಲ್ಲಿ ಹೊರ ಮತ್ತು ಒಳರೋಗಿ ನೋಂದಣಿ ಉಚಿತವಾಗಿದೆ. ಈ ವಾರ್ಡ್‌ಗಳಲ್ಲಿ ದಾಖಲಾಗುವ ಗರ್ಭಿಣಿಯರಿಗೆ ಪ್ರಾಥಮಿಕ ರಕ್ತ ತಪಾಸಣೆಗಳು, ಯುಎಸ್‌ಜಿ, ಸಾಮಾನ್ಯ ಹೆರಿಗೆ ಮತ್ತು ಸಿಜೆರಿಯನ್ ಮೂಲಕ ನಡೆಯುವ ಹೆರಿಗೆಗಳು ಉಚಿತವಾಗಿರಲಿವೆ. ಔಷಧಿಗಳು, ಬೆಳಿಗ್ಗೆಯ ಅಲ್ಪೋಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಉಚಿತವಾಗಿರಲಿದೆ. 

ADVERTISEMENT

ಆಸ್ಪತ್ರೆಗೆ ಬರುವಾಗ ಆಧಾರ್‌ ಕಾರ್ಡ್ ತರುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.