ಬಸವನಬಾಗೇವಾಡಿ: ‘ರಕ್ತದಾನ ಶ್ರೇಷ್ಠ ದಾನವಾಗಿದ್ದು, ಯುವಕರು ರಕ್ತದಾನದ ಮಹತ್ವ ತಿಳಿದು ರಕ್ತದಾನ ಮಾಡಲು ಮುಂದೆ ಬರಬೇಕು’ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜು ಯೂತ್ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್ ಘಟಕದ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಾಬೀರ ಪಟೇಲ್ ಮಾತನಾಡಿ, ‘ಪ್ರತಿಯೊಬ್ಬರೂ ತಮ್ಮ ರಕ್ತದ ಗುಂಪುಗಳ ಬಗ್ಗೆ ತಿಳಿದುಕೊಳ್ಳಬೇಕು. ಒಬ್ಬ ವ್ಯಕ್ತಿ ರಕ್ತದಾನ ಮಾಡಿದರೆ ನಾಲ್ಕು ಜನರ ಜೀವ ಉಳಿಸಬಹುದಾಗಿದೆ’ ಎಂದರು.
ತಾಲ್ಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕ ಎಸ್.ಆರ್. ಲಿಂಗದಳ್ಳಿ, ಗುರುಪ್ರಸಾದ್ ಕುಲಕರ್ಣಿ ಮಾತನಾಡಿದರು. ಪ್ರಾಚಾರ್ಯ ಎನ್.ಬಿ.ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಎಚ್.ಎಂ.ನಾಟಿಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್ ಕ್ರಾಸ್ ಘಟಕದ ಸಂಯೋಜಕಿ ಲೀಲಾವತಿ ಸಿ. ಸ್ವಾಗತಿಸಿದರು, ಬಾನು ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.