ಚಡಚಣ: ‘ತಂಬಾಕು ಸೇವನೆ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಆಹ್ವಾನ ನೀಡುತ್ತದೆ. ಆರೋಗ್ಯಕ್ಕೆ ಮಾರಕವಾಗುವ ತಂಬಾಕು ಸೇವನೆಯಿಂದ ದೂರ ಇರಬೇಕು’ ಎಂದು ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮನೋಜ ಕಟಗೇರಿ ಹೇಳಿದರು.
ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ್ಲಿ ಪೊಲೀಸ್ ಠಾಣೆ ಆಶ್ರಯದಲ್ಲಿ ಬುಧವಾರ ನಡೆದ ತಂಬಾಕು ಮುಕ್ತ ಅಭಿಯಾನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ತಂಬಾಕು, ಗುಟ್ಕಾ ಮತ್ತು ಸಿಗರೇಟ್ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಮಾರಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಜಗತ್ತಿನಲ್ಲಿ ಪ್ರತಿ ವರ್ಷ ಸುಮಾರು 80 ಲಕ್ಷ ಮತ್ತು ಪ್ರತಿ ದಿನ 22 ಸಾವಿರ ಜನರು ತಂಬಾಕು ಸೇವನೆಯಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ’ ಎಂದರು.
‘ವಿದ್ಯಾರ್ಥಿಗಳು ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಮಾಹಿತಿ ನೀಡಬೇಕು’ ಎಂದು ಸಲಹೆ ನೀಡಿದರು.
ಜಾಥಾದಲ್ಲಿ 700 ವಿದ್ಯಾರ್ಥಿಗಳು ಪಾಲ್ಗೊಂಡು, ತಂಬಾಕು ವಿರೋಧಿ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಹಾಯಕ ಸಬ್ ಇನಿಸ್ಪೆಕ್ಟರಗಳು, ಉಪನ್ಯಾಸಕರುಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.