ADVERTISEMENT

ನಿಡಗುಂದಿ | ಚೆಕ್‌ಪೋಸ್ಟ್‌ಗಳಿಗೆ ಡಿ.ಸಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2024, 15:19 IST
Last Updated 23 ಮಾರ್ಚ್ 2024, 15:19 IST
ನಿಡಗುಂದಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್‌.ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದರು
ನಿಡಗುಂದಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್‌.ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದರು   

ನಿಡಗುಂದಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್‌ಪೋಸ್ಟ್ ಮತ್ತು ಅರಳದಿನ್ನಿ ಗ್ರಾಮದ ಬಳಿಯ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್‌ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಚೆಕ್‌ಪೋಸ್ಟ್ ಮಾರ್ಗವಾಗಿ ಸಾಗುತ್ತಿದ್ದ ಕೆಲ ವಾಹನಗಳನ್ನು ಖುದ್ದು ಡಿ.ಸಿ ಮತ್ತು ಎಸ್‌.ಪಿ ಪರಿಶೀಲನೆ ಮಾಡಿದರು. ಅಂತರ್ ಜಿಲ್ಲಾ ಚೆಕ್‌ಪೋಸ್ಟ್‌ಗಳ ಮೂಲಕ ಹೊರಹೋಗುವ ಮತ್ತು ಒಳ ಬರುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸಿಬ್ಬಂದಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ‘ಜಿಲ್ಲೆಯಲ್ಲಿ 11 ಅಂತರರಾಜ್ಯ, 13 ಅಂತರ್ ಜಿಲ್ಲಾ ಸೇರಿ ಒಟ್ಟು 28 ಚೆಕ್‌ಪೋಸ್ಟ‌್ಗಳಿವೆ. ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಂದಾಜು ₹3 ಕೋಟಿಯನ್ನು ಇದುವರೆಗೆ ಜಿಲ್ಲೆಯ ನಾನಾ ಚೆಕ್ ಪೋಸ್ಟ್‌ಗಳಿಂದ ವಶಪಡಿಸಿಕೊಳ್ಳಲಾಗಿದೆ’ ಎಂದರು.

ADVERTISEMENT

ತಹಶೀಲ್ದಾರ್ ಕು.ನೀಲಪ್ರಭಾ, ಕಂದಾಯ ನಿರೀಕ್ಷಕ ಸಲೀಂ ಯಲಗೋಡ, ಸಿಪಿಐ ಶರಣಗೌಡ ಗೌಡರ ಇತರರಿದ್ದರು.

ನಿಡಗುಂದಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್‌ಪಿ ಋಷಿಕೇಶ ಸೋನಾವಣೆ ವಾಹನಗಳನ್ನು ತಪಾಸಣೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.