ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ವಸ್ತಿಯಲ್ಲಿ ಕೊಳವೆಬಾವಿಯೊಳಗೆ ಸಿಲುಕಿಕೊಂಡಿರುವ ಮಗುವಿನ ರಕ್ಣಣೆಗಾಗಿ ಅಹೋರಾತ್ರಿ ಕಾರ್ಯಾಚರಣೆ ನಡೆದಿದೆ.
ಬೆಳಗಾವಿ, ಕಲಬುರ್ಗಿಯಿಂದ ಎನ್‌ಡಿಆರ್‌ಎಫ್, ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದ್ದು, ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಗೆ ವೇಗ ನೀಡಿದ್ದಾರೆ.
ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಿಸುತ್ತಿದೆ.
ಕಾರ್ಯಾಚರಣೆ ವೇಳೆ ಕಲ್ಲು, ಗಟ್ಟಿಯಾದ ಗರಸು ಎದುರಾಗಿರುವ ಕಾರಣ ರಕ್ಷಣೆಗೆ ತೊಡಕಾಗಿದೆ. ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಕಾರ್ಯಾಚರಣೆ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.