ವಿಜಯಪುರ: ಕೃಷ್ಣೆಗೆ ಬಾಗಿನ ಅರ್ಪಿಸಲು ಶನಿವಾರ ಆಲಮಟ್ಟಿಗೆ ಆಗಮಿಸಿದ ತಮಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ವಂದನೆಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆದರು.
ಈ ಸಂಬಂಧಬೆಳಗಾವಿ ಉತ್ತರ ವಲಯ ಸತೀಶ್ ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
‘ಗೌರವ ವಂದನೆ ಏರ್ಪಡಿಸುವುದು ಬೇಡ ಎಂದು ಈ ಮೊದಲೇ ಸೂಚನೆ ನೀಡಿರಲಿಲ್ಲವೇ? ನಿಮ್ಮ ಕಿರಿಯ ಸಿಬ್ಬಂದಿಗೆ ಈ ಕುರಿತು ಮಾಹಿತಿ ನೀಡಿರಲಿಲ್ಲವೇ? ಎಂದು ಪ್ರಶ್ನಿಸಿದರು.
ಈ ಸಂಬಂಧ ಮುಖ್ಯಮಂತ್ರಿ ಬಳಿಎಸ್ಪಿ ಮತ್ತು ಐಜಿಪಿ ಕ್ಷಮೆಯಾಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.