ವಿಜಯಪುರ: ಕರ್ತವ್ಯಲೋಪ ಹಿನ್ನೆಲೆ ವಿಜಯಪುರ ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ವಿಜಯಪುರ ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೋಂದಣಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಅನುಮೋದನೆ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಡಿಡಿಪಿಐ ನಾಗೂರ ವಿರುದ್ಧ ಶಿಸ್ತು ಕ್ರಮ ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.