ADVERTISEMENT

ವಿಜಯಪುರ: ಬರ ಪರಿಹಾರದ ಸ್ಪಷ್ಟತೆ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2024, 15:26 IST
Last Updated 2 ಜೂನ್ 2024, 15:26 IST
ಮುಂಗಾರು ಹಂಗಾಮಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಪರಿಹಾರದ ಮೊತ್ತದ ಸ್ಪಷ್ಟತೆ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು
ಮುಂಗಾರು ಹಂಗಾಮಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಪರಿಹಾರದ ಮೊತ್ತದ ಸ್ಪಷ್ಟತೆ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು   

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಪರಿಹಾರದ ಮೊತ್ತದಲ್ಲಿ ಅನೇಕ ಗೊಂದಲಗಳಿದ್ದು ಅದರ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಈಚೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೆಶ ಸಗರ ಮಾತನಾಡಿ, ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ನೀಡಿರುವ ಬರ ಪರಿಹಾರದ ಮೊತ್ತದ ಸಮನಾಗಿ ರಾಜ್ಯ ಸರ್ಕಾರ ಕೂಡಾ ನೀಡಬೇಕು ಎಂಬ ನಿಯಮಾಳಿ ಇದೆ. 2 ಹೆಕ್ಟೆರ್‌ ಭೂಮಿ ಹೊಂದಿರುವ ರೈತರಿಗೆ ₹34,000 ಪರಿಹಾರ ನೀಡಬೇಕು, ಆದರೆ ಕೇಂದ್ರ ಸರ್ಕಾರ ನೀಡಿರುವ ಹಣದಲ್ಲಿ ರಾಜ್ಯ ಸರ್ಕಾರ ನೀಡಿರುವ ₹2,000 ಹಣ ಕಡಿತಗೊಳಿಸಿ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ, ಈ ಕುರಿತು ಸ್ಪಷ್ಟತೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈವರೆಗೆ ಸುಮಾರು 15,000ಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಿಲ್ಲ, ರೈತರು ಈ ಬಗ್ಗೆ ಆತಂಕಗೊಂಡಿದ್ದಾರೆ. ಅವರಿಗೆ ಹೊಲದಲ್ಲಿ ತೊಗರಿ ಬೆಳೆ, ಕಾಲುವೆ ಇದ್ದರೆ ಬರುವುದಿಲ್ಲ ಎಂದು ಇಲಾಖೆಯ ಅಧಿಕಾರಿಗಳು ತಪ್ಪು ಸಂದೇಶ ನೀಡುತ್ತಿದ್ದಾರೆ. ಕೂಡಲೇ ತಂತ್ರಜ್ಞಾನದ ಅವಘಡದಿಂದ ಆಗಿರುವ ತಪ್ಪುಗಳನ್ನು ಸರಿಪಡಿಸಿ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ವಿಜಯಪುರ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವಪ್ಪ ತೇಲಿ, ಗೌರವಾಧ್ಯಕ್ಷ ಕಲ್ಲಪ್ಪ ಪಾರಶೆಟ್ಟಿ, ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಿಕೋಟಾ ತಾಲ್ಲೂಕು ಉಪಾಧ್ಯಕ್ಷ ಶಾನೂರ ನಂದರಗಿ, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಪ್ರಭುಲಿಂಗ ಕಾರಜೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.