ವಿಜಯಪುರ:‘ಕಾಂಗ್ರೆಸ್ ಪಕ್ಷದೊಳಗಿನ ಸಾಮಾಜಿಕ ನ್ಯಾಯದ ಪರಿಕಲ್ಪನೆಯಂತೆ ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್‌ನ್ನು ಬಂಜಾರ ಸಮುದಾಯಕ್ಕೆ ನೀಡಬೇಕು’ ಎಂದು ಮಾಜಿ ಶಾಸಕ ಮನೋಹರ ಐನಾಪುರ ಆಗ್ರಹಿಸಿದರು.
‘ಈಚೆಗಿನ ದಿನಗಳಲ್ಲಿ ಹೊರಗಿನ ಅಭ್ಯರ್ಥಿಗಳಿಗೆ ಮಣೆ ಹಾಕಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ಕೊಡಬಾರದು. ಸ್ಥಳೀಯರಿಗೆ ಟಿಕೆಟ್ ಕೊಡಬೇಕು’ ಎಂದು ಶನಿವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಚಿತ್ರದುರ್ಗ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಸಮುದಾಯದವರಿಗೆ ಮನ್ನಣೆ ನೀಡಲಾಗಿದೆ. ಕಲಬುರ್ಗಿ, ಚಾಮರಾಜನಗರದಲ್ಲಿ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿದೆ. ಉಳಿದಿರುವ ಏಕೈಕ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಂಜಾರ ಸಮುದಾಯಕ್ಕೆ ಈ ಬಾರಿಯೂ ಸ್ಪರ್ಧಿಸಲು ಅವಕಾಶ ಕೊಡಬೇಕು’ ಎಂದು ಐನಾಪುರ ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಿದರು.
‘ಪ್ರಕಾಶ ರಾಠೋಡ ವಿಜಯಪುರದಲ್ಲಿ ನೆಲೆಸದ ಪರಿಣಾಮ ಅವಕಾಶ ಕೊಟ್ಟರೂ ಗೆಲ್ಲಲು ಸಾಧ್ಯವಾಗಿಲ್ಲ. ಇದೇ ರೀತಿ ಬೆಂಗಳೂರು ವಾಸ್ತವ್ಯ. ಮುಖಂಡರು ಬಂದಾಗ ಜಿಲ್ಲೆಗೆ ಭೇಟಿ ನೀಡುವ ಮುಖಂಡರಿಗೂ ಮನ್ನಣೆ ನೀಡಬಾರದು. ಸ್ಥಳೀಯವಾಗಿಯೇ ಇರುವ ಲಂಬಾಣಿ ಸಮಾಜದ ಪ್ರಮುಖರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಬೇಕು’ ಎಂದು ಮಾಜಿ ಶಾಸಕರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.