ADVERTISEMENT

ಶೇ 10ರಷ್ಟು ತೆರಿಗೆ ಸಂಗ್ರಹ; ಗ್ರಾ.ಪಂ.ಗಳಿಗೆ ಸೂಚನೆ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:42 IST
Last Updated 3 ಜುಲೈ 2024, 15:42 IST
ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಅಧಿಕಾರಿಗಳೊಂದಿಗೆ ಚರ್ಚಿಸಿದರು
ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಅಧಿಕಾರಿಗಳೊಂದಿಗೆ ಚರ್ಚಿಸಿದರು   

ವಿಜಯಪುರ: ಗ್ರಾಮ ಪಂಚಾಯ್ತಿಗಳಿಂದ ಪ್ರಸ್ತುತ ಶೇ 4 ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ 10ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲ್ಲೂಕಿನ ಗಬಸಾವಳಗಿ ಗ್ರಾಮ ಪಂಚಾಯಿತಿಗಳಿಗೆ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸಂಗ್ರಹವಾದ ತೆರಿಗೆಯಲ್ಲಿ ಶೇ 6ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು ಹಾಗೂ ದಿನ ಪತ್ರಿಕೆಗಳಿಗೆ ಅನುದಾನ ಕಾಯ್ದಿರಿಸಬೇಕು. ಗ್ರಾಮದಲ್ಲಿ ಕುಡಿಯುವ ನೀರು ಇತರೆ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಬೇಕು. ತಮ್ಮ ನಿಯೋಜಿತ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ವಿವಿಧ ಯೋಜನೆಗಳ ಪ್ರಗತಿಯ ಗುರಿ ಸಾಧಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ಮಹಾತ್ಮಗಾಂಧಿ ನರೇಗಾ ಯೋಜನೆ, ವಸತಿ ಯೋಜನೆ, ಸ್ವಚ್ಚ ಭಾರತ ಮಿಷನ್, ಸಕಾಲ, ಆಸ್ತಿಗಳ ಸಮೀಕ್ಷೆ, ಗ್ರಂಥಾಲಯಗಳ ಡಿಜಿಟಲೀಕರಣ, ಇ-ಸ್ವತ್ತು ಹಾಗೂ ತೆರಿಗೆ ವಸೂಲಾತಿ ಹಾಗೂ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತೋಟಗಾರಿಕೆ ಸಹಯೋಗದಲ್ಲಿ ಲಿಂಬೆ ಸಸಿ ನಾಟಿ ಮಾಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಿ, ಕಾಮಗಾರಿ ಅನುಷ್ಠಾನ ಸಂಬಂಧಿಸಿದಂತೆ ನರೇಗಾ ಯೋಜನೆಯ ಸಹಾಯಧನ, ಸಸಿಗಳ ಲಭ್ಯತೆ, ಸಸಿಗಳ ನಾಟಿ ಹಾಗೂ ರೈತರಿಗೆ ದೊರೆಯುವ ಲಾಭಾಂಶ ಕುರಿತಾಗಿ ರೈತರೊಂದಿಗ ಸಂವಾದ ನಡೆಸಿದರು.

ಲಿಂಬೆ ಬೆಳೆಗೆ ತಗಲುವ ರೋಗಬಾಧೆ ನಿಯಂತ್ರಿಸಲು ರೈತರಿಗೆ ಅಗತ್ಯ ಸಲಹೆ ನೀಡಲು ಸ್ಥಳದಲ್ಲಿದ್ದ ತೋಟಗಾರಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಿರ್ಮಾಣವಾದ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಯಾವುದೇ ದುರಸ್ತಿ ಕಾಮಗಾರಿಗಳಿದ್ದರೆ ಆದ್ಯತೆ ಮೇರೆಗೆ ಮುಂದಿನ 15 ದಿನಗಳಲ್ಲಿ ಪೂರ್ಣಗೊಳಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ತಾರಾನಾಥ ರಾಠೋಡ ಅವರಿಗೆ ಸೂಚನೆ ನೀಡಿದರು.

ನವೀಕರಣಗೊಳ್ಳುತ್ತಿರುವ ಕನ್ನೊಳ್ಳಿ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಗೆ ವೇಗ ನೀಡಿ ಆದಷ್ಟು ಬೇಗ ಪೂರ್ಣಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಜಿ. ಪಂ. ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಬಸವರಾಜ ಕುಂಬಾರ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಎನ್. ಎಂ. ಗಬಸಾವಳಗಿ, ಸಿಂದಗಿ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ ಅಗ್ನಿ, ಆಲಮೇಲ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ  ಫರೀದಾಬಾನು ಪಠಾಣ, ಜಿ.ಪಂ. ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಸಿಂದಗಿ ತಾ. ಪಂ. ಸಹಾಯಕ ನಿರ್ದೇಶಕರು ನಿತ್ಯಾನಂದ ಯಲಗೋಡ, ಆಲಮೇಲ ತಾಲ್ಲೂಕಿನ ಸಹಾಯಕ ನಿರ್ದೇಶಕ ಸಿದ್ದು ಅಂಕಲಗಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ. ವೈ. ಮುರಾಳ, ಕೆಆರ್‌ಐಡಿಎಲ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಜಶೇಖರ ಜೊತಗೊಂಡ, ಕನ್ನೊಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಪ್ರಕಾಶ ನಾಯಕ, ಗಬಸಾವಳಗಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಜ್ಯೋತಿ ಶೇಗಾವಿ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.