ವಿಜಯಪುರ: ವಿಶ್ವ ಮೂಲವ್ಯಾಧಿ ದಿನ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾಸ್ಪತ್ರೆ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನ.19 ರಂದು ಬೆಳಿಗ್ಗೆ 6 ರಿಂದ 7ರ ವರೆಗೆ ಬಿ.ಎಲ್.ಡಿ.ಇ. ಆಸ್ಪತ್ರೆಯಿಂದ ಗೋಳಗುಮ್ಮಟದವರೆಗೆ ಸೈಕ್ಲೋಥಾನ್, ಬೆಳಿಗ್ಗೆ 7 ರಿಂದ 8ರ ವರೆಗೆ ಗೋಳಗುಮ್ಮಟದ ಆವರಣದಲ್ಲಿ ಮೂಲವ್ಯಾಧಿ ರೋಗದ ಕುರಿತು ಜನಜಾಗೃತಿ ಶಿಬಿರ. ಮಧ್ಯಾಹ್ನ 3 ರಿಂದ 4ರ ವರೆಗೆ ಶಸ್ತ್ರಚಿಕಿತ್ಸೆ ವಿಭಾಗದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 4 ರಿಂದ 5ರ ವರೆಗೆ ನಿಧಾನಗತಿಯ ಸೈಕಲ್ ರೇಸ್ ಸ್ಪರ್ಧೆ ಆಯೋಜಿಸಲಾಗಿದೆ.
ನ.20 ರಂದು ಬಿ.ಎಲ್.ಡಿ.ಇ, ಅಲ್ ಅಮೀನ್ ಮತ್ತು ವಿಜಯಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಮೂಲವ್ಯಾಧಿ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಸಂಜೆ 5 ರಿಂದ 5.30ರ ವರೆಗೆ ವಿಜಯಪುರ ಎಫ್.ಎಂ. ರೇಡಿಯೋ ಸಹಯೋಗದೊಂದಿಗೆ ಬಿ.ಎಲ್.ಡಿ.ಇ. ಡಾಕ್ಟರ್ ಆರೋಗ್ಯದಂಗಳ ಕಾರ್ಯಕ್ರಮದಲ್ಲಿ ಡಾ.ನಾಗರಾಜ ಬಿರಾದಾರ ಅವರು ಮೂಲವ್ಯಾಧಿ ರೋಗದ ಕುರಿತು ಸಂದರ್ಶನ ಆಯೋಜಿಸಲಾಗಿದೆ.
ವಿಜಯಪುರ ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆಯಲು ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ.ರಮಾಕಾಂತ ಬಳೂರಕರ ಮತ್ತು ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ. ಜಸಪಾಲಸಿಂಗ ತೆಹಲಿಯಾ ಜಂಟಿ ಪ್ರಕಟಣೆಯಲ್ಲಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.