ವಿಜಯಪುರ: ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು ಕುಟುಂಬದೊಂದಿಗೆ ಶುಕ್ರವಾರ ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಗಾಂಧಿ ಪ್ರತಿಮೆ, ಗಾಂಧೀ ವಿಚಾರ ಧಾರೆಗಳ ಕುರಿತ ಮಾಹಿತಿ ವಿವರ, ಗಾಂಧೀಜಿ ಕುರಿತ ಜಗತ್ತಿನ ನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳ ಕುರಿತಾದ ಮಾಹಿತಿ ವಿವರ ಓದಿ ಪ್ರಶಂಸೆ ವ್ಯಕ್ತಪಡಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ವೀಕ್ಷಿಸಿದ ಅವರು ಇಲ್ಲಿನ ಬಹುಮೂಲ್ಯ ಸಂಗ್ರಹದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗಾಂಧಿ ಭವನದ ಸದಸ್ಯರಾದ ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.