ವಿಜಯಪುರ: ಉತ್ತರಕರ್ನಾಟಕ ಸ್ವಾಭಿಮಾನ ವೇದಿಕೆ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ-3 ನೇ ಹಂತ ಶೀಘ್ರ ಅನುಷ್ಠಾನಕ್ಕಾಗಿ ಅ.2ರಂದು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮನವಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ಅನಗವಾಡಿ ಸೇತುವೆ ಬಳಿಯಿಂದ ಅ.2 ರಂದು ಬೆಳಿಗ್ಗೆ 8ಕ್ಕೆ ಆರಂಭವಾಗಿ ಕೊರ್ತಿ ಕೋಲ್ಹಾರ ಕೃಷ್ಣಾ ನದಿ ಸೇತುವೆ ವರೆಗೆ ನಡೆಯಲಿರುವ ಈ ಪಾದಯಾತ್ರೆಯಲ್ಲಿ ವಿಜಯಪುರ-ಬಾಗಲಕೋಟೆ ಜಿಲ್ಲೆಯ ವಿವಿಧ ಮಠಾಧೀಶರು, ರೈತ ಸಂಘಟನೆಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಯುಕೆಪಿ ಸಂತ್ರಸ್ತರು, ರೈತ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ನಮ್ಮ ರೈತರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಹಕ್ಕುಗಳ ಕುರಿತುಪಕ್ಷಾತೀತವಾಗಿ ಸರ್ಕಾರದ ಗಮನ ಸೆಳೆಯಬೇಕು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.