ADVERTISEMENT

ಪ್ರತಿದಿನ ವಸತಿನಿಲಯಗಳ ನಿರ್ವಹಣೆಗೆ ಸೂಚನೆ: ರಿಷಿ ಆನಂದ್‌

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:07 IST
Last Updated 2 ಜುಲೈ 2024, 16:07 IST
ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಮಕ್ಕಳೊಂದಿಗೆ ಸಂವಾದ ನಡೆಸಿದರು
ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಮಕ್ಕಳೊಂದಿಗೆ ಸಂವಾದ ನಡೆಸಿದರು   

ವಿಜಯಪುರ: ವಸತಿ ನಿಲಯಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ವಚ್ಛತೆ ಹಾಗೂ ಕಲ್ಪಿಸಿರುವ ಮೂಲ ಸೌಲಭ್ಯಗಳನ್ನು ಪ್ರತಿದಿನವೂ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌ ಸೂಚಿಸಿದರು.

ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಮೂರು ಬಾಲಕಿಯರ ವಸತಿ ನಿಲಯಗಳು ಹಾಗೂ ಎರಡು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಸೋಮವಾರ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯ ಪರಿಶೀಲಿನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಸಮಯಾನುಸಾರ ಉಪಾಹಾರ, ಊಟ, ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಪೂರೈಸಬೇಕು. ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಒದಗಿಸಬೇಕು. ಪ್ರತಿ ತಿಂಗಳು ತಪ್ಪದೇ ವೈದ್ಯಕೀಯ ತಪಾಸಣೆ ನಡೆಸಿ, ಅವರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೇಪಿಸಬೇಕು. ವಸತಿ ನಿಲಯದಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯಗಳು ಬಾಕಿ ಇದ್ದಲ್ಲಿ ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ADVERTISEMENT

ಅಡುಗೆ ಕೊಠಡಿ, ಭೋಜನಾಲಯ, ಸೋಲಾರ್ ವ್ಯವಸ್ಥೆ, ವಿದ್ಯಾರ್ಥಿ ತಂಗುವ ಕೊಠಡಿಗಳು, ಆಹಾರ ಪದಾರ್ಥಗಳ ಪರಿಶೀಲಿಸಿದರು.

ವಸತಿ ನಿಲಯದ ಆವರಣದಲ್ಲಿರುವ ಗ್ರಂಥಾಲಯಕ್ಕೆ ತೆರಳಿ, ‘ವಿದ್ಯಾರ್ಥಿ ಜೀವನ ಬಹು ಪ್ರಮುಖ ಘಟ್ಟವಾಗಿದ್ದು, ಓದಿನೆಡೆಗೆ ಗಮನಹರಿಸಬೇಕು ಪಠ್ಯ ವಿಷಯ ಕರಗತ, ಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಜ್ಞಾನವೂ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಕೈಗೊಳ್ಳಬೇಕು. ಓದಿನಲ್ಲಿ ಆಸಕ್ತಿ ತಾಳಿದಾಗ ಗುರಿ ಸಾಧಿಸಲು ಸಾಧ್ಯ’ ಎಂದು ಹೇಳಿದರು.

ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮುಂಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ದೃಢವಿಶ್ವಾಸದಿಂದ ಅಧ್ಯಯನ ಕೈಗೊಂಡು, ಉತ್ತಮ ಸಾಧನೆ ತೋರಿ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈರಣ್ಣ ಆಶಾಪುರ, ಸಹಾಯಕ ನಿರ್ದೇಶಕರಾದ ಎಸ್.ಎಂ. ಪಾಟೀಲ ಹಾಗೂ ವಸತಿ ನಿಲಯಗಳ ನಿಲಯ ಪಾಲಕರಾದ ಟಿ.ವಿ.ಹಂಚನಾಳ, ಪಾರ್ವತಿ ಆಲಮೇಲ, ರೂಪಾ ಮೇತ್ರಿ, ಪೂಜಾ ನಿಕ್ಕಂ, ಶಿರಿನಾ ಅಗಸಿಮುಂದಿನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.