ADVERTISEMENT

ಆಲಮಟ್ಟಿ ಜಲಾಶಯ ಹೊರಹರಿವು ಒಂದೂವರೆ ಲಕ್ಷ ಕ್ಯುಸೆಕ್ ಏರಿಕೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 13:44 IST
Last Updated 21 ಜುಲೈ 2024, 13:44 IST
<div class="paragraphs"><p>ಆಲಮಟ್ಟಿ ಜಲಾಶಯ</p></div>

ಆಲಮಟ್ಟಿ ಜಲಾಶಯ

   

ವಿಜಯಪುರ: ಆಲಮಟ್ಟಿ ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಭಾನುವಾರ ಮಧ್ಯಾಹ್ನದಿಂದ ಹೊರಹರಿವನ್ನು ಒಂದೂವರೆ ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಂದು ಲಕ್ಷ ಕ್ಯುಸೆಕ್ ಗೂ ಅಧಿಕ ನೀರು ಹರಿದು ಬರುತ್ತಿದೆ. ಇದು ಮೂರ್ನಾಲ್ಕು ದಿನ ಮುಂದುವರೆಯಲಿದೆ. ಜಲಾಶಯ ಭರ್ತಿಗೆ ಇನ್ನೂ 27 ಟಿಎಂಸಿ ಅಡಿ ನೀರು ಬಾಕಿ‌ ಇದ್ದರೂ ಮುಂಜಾಗ್ರತೆಯ ಕ್ರಮವಾಗಿ ಹೊರಹರಿವನ್ನು ಹೆಚ್ಚಿಸಲಾಗಿದೆ.

ADVERTISEMENT

ಕೃಷ್ಣಾ ನದಿಯಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಕೃಷ್ಣಾ ತೀರದ ಗ್ರಾಮಗಳಲ್ಲಿ‌ ಮತ್ತೆ ನೆರೆಯ ಆತಂಕ ಉಂಟಾಗಿದೆ.

ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಅರಳದಿನ್ನಿ, ಯಲಗೂರ, ಯಲ್ಲಮ್ಮನ ಬೂದಿಹಾಳ, ಮಸೂತಿ ಗ್ರಾಮಗಳಿಗೆ ನಿಡಗುಂದಿ ತಹಶೀಲ್ದಾರ್ ಎ.ಡಿ. ಅಮರವಾಡಗಿ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.