ADVERTISEMENT

ವಕ್ಫ್ ಆಸ್ತಿ ವಿವಾದ: ಮುಂದುವರಿದ ಯತ್ನಾಳ, ಕರಂದ್ಲಾಜೆ ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 15:43 IST
Last Updated 6 ನವೆಂಬರ್ 2024, 15:43 IST
<div class="paragraphs"><p>ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿದರು</p></div>

ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿದರು

   

– ಪ್ರಜಾವಾಣಿ ವರದಿ

ವಿಜಯಪುರ: ವಕ್ಫ್‌ ಕಾಯ್ದೆಯನ್ನು ರದ್ದುಗೊಳಿಸಬೇಕು, ರೈತರ, ಮಠ ಮಾನ್ಯಗಳ ಜಮೀನು ಹಾಗೂ  ಸರ್ಕಾರಿ ಆಸ್ತಿಗಳ ಪಹಣಿಯಲ್ಲಿ ನಮೂದಿಸಿರುವ ವಕ್ಪ್ ಹೆಸರನ್ನು ತಕ್ಷಣ ತೆಗೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿರಿಸಿದೆ.

ADVERTISEMENT

ಬುಧವಾರದ ಧರಣಿಯಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜ ಸ್ವಾಮೀಜಿ, ಭಾರತೀಯ ದ್ರಾವಿಡ ದಲಿತ ಸೇನೆಯ ರಾಜ್ಯಾಧ್ಯಕ್ಷ ರಮೇಶ ಚಲವಾದಿ, ಮತ್ತಿತರು ಭಾಗವಹಿಸಿ, ಬೆಂಬಲ ಸೂಚಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.