ವಿಜಯಪುರ: ನಗರದ ಕೈಗಾರಿಕಾ ಪ್ರದೇಶದಲ್ಲಿರುವ ‘ರಾಜಗುರು ಇಂಡಸ್ಟ್ರೀಸ್’ ಗೋದಾಮಿನ ಆಹಾರ ಸಂಸ್ಕರಣಾ ಘಟಕದಲ್ಲಿ ಸೋಮವಾರ ಸಂಜೆ, ಮೆಕ್ಕೆ ಜೋಳದ ಮೂಟೆಗಳು ಉರುಳಿ ಬಿದ್ದು, ಅವುಗಳ ಅಡಿಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ನಡೆದಿದೆ.
ನಾಲ್ಕು ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದರು.
ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರು ಬಿಹಾರ ಮೂಲದವರು ಎನ್ನಲಾಗಿದೆ. ಹಲವು ವರ್ಷಗಳಿಂದ ಇದೇ ಇಂಡಸ್ಟ್ರೀಸ್ನಲ್ಲಿ ಕೆಲಸ ಮಾಡುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.