ADVERTISEMENT

ಮಂಕಿ ಪಾಕ್ಸ್; ಪ್ರಕರಣ ವರದಿಯಾಗಿಲ್ಲ: ಆರೋಗ್ಯಾಧಿಕಾರಿ ಡಾ.ರಾಖಿ ಮಾನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 16:04 IST
Last Updated 27 ಆಗಸ್ಟ್ 2024, 16:04 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸೋಲಾಪುರ: ‘ನಗರದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಪ್ರಕರಣಗಳ ಬಗ್ಗೆ ವರದಿಯಾಗಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ’ ಎಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ರಾಖಿ ಮಾನೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ನಗರದಲ್ಲಿ ಈವರೆಗೆ ಎರಡು ಮಲೇರಿಯಾ, ಮೂರು ಡೆಂಗಿ ಪ್ರಕರಣಗಳು ವರದಿಯಾಗಿವೆ. ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಐವರು ರೋಗಿಗಳನ್ನು ಡಿಸ್ಚಾರ್ಜ್ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಮಳೆಗಾಲದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚು, ಆ ಕಾರಣಕ್ಕಾಗಿ ಆರೋಗ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ. ಡೆಂಗಿ, ಮಲೇರಿಯಾ, ಅತಿಸಾರ, ಜ್ವರದ ಲಕ್ಷಣಗಳು ಇರುವ ರೋಗಿಗಳನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ಈವರೆಗೆ 1997 ಜ್ವರದ ರೋಗಿಗಳು, 189 ಅತಿಸಾರ ಪ್ರಕರಣಗಳು, ಮಲೇರಿಯಾ ಲಕ್ಷಣಕ್ಕೆ ಸಂಬಂಧಿತ 330 ಜನರನ್ನು ಪರೀಕ್ಷಿಸಲಾಗಿದ್ದು, ಅವುಗಳ ಪೈಕಿ ಇಬ್ಬರಿಗೆ ಮಲೇರಿಯಾ ದೃಢಪಟ್ಟಿದೆ. ಡೆಂಗಿ ಲಕ್ಷಣಕ್ಕೆ ಸಂಬಂಧಿಸಿದಂತೆ 180 ರೋಗಿಗಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ ಮೂವರಲ್ಲಿ ಡೆಂಗಿ ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಲೇರಿಯಾ ಹಾಗೂ ಡೆಂಗಿ ಸಂಬಂಧಿತ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.