ADVERTISEMENT

‘ಗ್ರಾಮಗಳ ಅಭಿವೃದ್ಧಿಗಾಗಿ ನರೇಗಾ ಯೋಜನೆಯಡಿ ಕೆಲಸ ಮಾಡಿ’

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:07 IST
Last Updated 19 ಜೂನ್ 2024, 16:07 IST
ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಡೆದ ಗೋಮಾಳ ಕಾಮಗಾರಿಯನ್ನು ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳ್ಳಿನ‌ ವೀಕ್ಷಿಸಿದರು
ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಡೆದ ಗೋಮಾಳ ಕಾಮಗಾರಿಯನ್ನು ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳ್ಳಿನ‌ ವೀಕ್ಷಿಸಿದರು   

ತಿಕೋಟಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ‌ವರು ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೀರಿ ಎಂಬ ಭಾವನೆ ಹೊಂದಬೇಕು. ಏಕೆಂದರೆ, ನೀವು ಮಾಡುವ ಈ ಕಾರ್ಯಗಳು ಕೇವಲ ಒಬ್ಬ ವ್ಯಕ್ತಿಗೆ ಲಾಭವಾಗುವುದಿಲ್ಲ. ಬದಲಾಗಿ ಇಡೀ ಗ್ರಾಮದ ಜನರಿಗೆ ಈ ಕಾಮಗಾರಿಯಿಂದ ಲಾಭವಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ‌ ನಿರ್ದೇಶಕಿ ಶೋಭಕ್ಕ ಶಿಳೀನ ಹೇಳಿದರು.

ತಾಲ್ಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಮೃತ ಸರೋವರ, ಗೋಮಾಳ ಮತ್ತು ಹೂಳೆತ್ತುವ ಕಾಮಗಾರಿಗಳನ್ನು ವೀಕ್ಷಿಸಿ ಕೂಲಿಕಾರರೊಡನೆ ಚರ್ಚಿಸಿ ಅವರು ಮಾತನಾಡಿದರು.

ಗ್ರಾಮದ ಮಾದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿ ಕಡತಗಳ ಪರಿಶೀಲನೆ ಹಾಗೂ ನೀರಿನ ಪರೀಕ್ಷೆ ನಡೆಸಿದರು.

ADVERTISEMENT

ಪಿಡಿಒ ಪದ್ಮಿನಿ ಬಿರಾದಾರ, ತಾಂತ್ರಿಕ ಸಂಯೋಜಕ ಸಂಜೀವಕುಮಾರ ಬಿರಾದಾರ, ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ರೇಷ್ಮಾ ಭಾಗವಾನ, ಕಾಸಪ್ಪ ತಳವಾರ, ಸಂತೋಷ ಗೊಜ್ಜಿ, ಸರೋಜಾ ರಾಠೋಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.