ಮುದ್ದೇಬಿಹಾಳ: ಜನವರಿ ತಿಂಗಳಿಂದ ಕುಂಟೋಜಿ ಚೆನ್ನವೀರ ದೇವರ ಗುರುಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಬಸವ ನಗರದ ಉದ್ಯಾನದಲ್ಲಿ ಭಾನುವಾರ ಪಟ್ಟಾಧಿಕಾರ ಮಹೋತ್ಸವದ ಪ್ರಕಟಣೆ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
‘ಪಟ್ಟಾಧಿಕಾರ ಮಹೋತ್ಸವ ಅದ್ಧೂರಿಯಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಮಿತಿ ಸಿದ್ಧವಿದೆ. ಹಲವು ಗಣ್ಯರು ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ದೇಣಿಗೆಯ ವಾಗ್ದಾನಗಳನ್ನೂ ಮಾಡಿದ್ದಾರೆ’ ಎಂದರು.
ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು ಮಾತನಾಡಿ, ‘ಎಲ್ಲ ಕಾರ್ಯಕ್ರಮಗಳು ಸ್ವಾಗತ ಸಮಿತಿ ನೇತೃತ್ವದಲ್ಲಿ ನಡೆಯಲಿವೆ’ ಎಂದರು.
ಕೆಂಭಾವಿ ಚೆನ್ನಬಸವ ಸ್ವಾಮೀಜಿ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ, ಸಂಗನಗೌಡ ಪಾಟೀಲ್, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್, ಉದ್ಯಮಿ ಶರಣು ಸಜ್ಜನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.