ADVERTISEMENT

ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ: ನಲವಡೆ

ಪೊಲೀಸ್ ಹುತ್ಮಾತರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 14:30 IST
Last Updated 21 ಅಕ್ಟೋಬರ್ 2024, 14:30 IST
ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಮಾತನಾಡಿದರು
ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಮಾತನಾಡಿದರು   

ವಿಜಯಪುರ: ಒತ್ತಡದ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೇ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರನ್ನು ಸಮಾಜ ನೆನೆಯಬೇಕಾಗಿದೆ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಣೆ ಮಾಡುವುದು ನಮ್ಮ  ಕರ್ತವ್ಯ’ ಎಂದು ಹೇಳಿದರು.

ದೇಶದ ಭದ್ರತೆ ಹಾಗೂ ರಕ್ಷಣೆಯ ಸಂದರ್ಭದಲ್ಲಿ ಹೋರಾಡಿ ತಮ್ಮ ಜೀವ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಗೌರವ ನಮನ ಸಲ್ಲಿಸಲಾಗುತ್ತಿದೆ. 1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ಪೊಲೀಸರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ ಎಂದರು.

‘ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವ ತ್ಯಾಗ ಮಾಡುತ್ತಾರೆ. ದೇಶದ ಜನರ ನೆಮ್ಮದಿಗಾಗಿ ಶಾಂತಿಯಿಂದ ಜೀವನ ನಡೆಸಲು ಅವರ  ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ’ ಎಂದರು.

ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ, ‘ದೇಶದಲ್ಲಿ ಈ ವರ್ಷ 216 ಪೊಲೀಸರು, ಸೈನಿಕರು ದೇಶಕ್ಕಾಗಿ ವೀರ ಮರಣ ಹೊಂದಿದ್ದಾರೆ’ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.

ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಟಿ.ಭೂಲನ್ ಪುಷ್ಪ ನಮನ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.